ಮುಖ್ಯಾಂಶಗಳು

ಕರ್ನಾಟಕದಲ್ಲಿ ಇನ್ನೂ ಮುಂದೆ ಹುಕ್ಕಾ ನಿಷೇದ!

ರಾಜ್ಯದಲ್ಲಿ ಆರೋಗ್ಯ ದೃಷ್ಟಿಯಿಂದ ಹುಕ್ಕಾ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ, ಸ್ವಾಧಭರಿತ, ಸ್ವಾಧರಹಿತ ಹುಕ್ಕಾ ಮೊಲಾಸಸ್, ಶಿಶಾ ಹಾಗೂ ಇದೇ ಮಾದರಿಯ ಇನ್ನಿತರೆ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ, ಉತನಗಳ ಮಾರಾಟ, ಸೇವನೆ, ಜಾಹೀರಾತು. ಪ್ರಚೋದನೆ, ಸಂಗ್ರಹಣೆ, ವ್ಯಾವಾರವನ್ನು ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಎರಡು ಪುಟಗಳಲ್ಲಿ ಆದೇಶದ ಪ್ರತಿಯಲ್ಲಿ ಹೀಗೆ ಬರೆದುಕೊಂಡಿದೆ.

ವಿಶ್ವ ಆರೋಗ್ಯ ಸಂಸ್ಥೆ (WHO) ನಡೆಸಿರುವ ಗ್ಲೋಬಲ್ ಅಡಲ್ಸ್ ಟೊಬ್ಯಾಕೊ ಸರ್ವೇ 2016-17 ಅಧಯನ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು (15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು) ಒಂದಲ್ಲ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ ಶೇ.8.8 ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ವರೋಕ್ಷ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ.

ಭಾರತದಲ್ಲಿ ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ, ಜಾಹೀರಾತು, ಸಂಗ್ರಹಣೆ, ವಾಣಿಜ್ಯ, ಮಹಾರ, ಉತ್ಪಾದನೆ ಹಂಚಿಕೆ ಇವುಗಳನ್ನು ಸಿಗರೇಟ್ ಅಂಡ್ ಟೊಬ್ಯಾಕೋ ಪ್ರಾಡಕ್ಟ್ ಆಕ್ಸ್ (COTPA) 2003 ರಲ್ಲಿ ನಿಯಂತ್ರಿಸಲಾಗಿದೆ.

ಅಧಯನಗಳ ಪ್ರಕಾರ, 45 ನಿಮಿಷಗಳ ಹುಕ್ಕಾ ಸೇವನೆ. 100 ಸಿಗರೇಟ್ ಸೇದುವುದಕ್ಕೆ ಸಮನಾಗಿರುತ್ತದೆ ಹಾಗೂ ಆರೋಗ್ಯಕ್ಕೆ ಮಾರಕ ಎಂದು ಉಲ್ಲೇಖಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, ಹುಕ್ಕಾ ಒಂದು ವ್ಯಸನಕಾರಿ ವಸ್ತುವಾಗಿದ್ದು, ಅದರಲ್ಲಿರುವ ನಿಕೋಟಿನ್ ಅಥವಾ ತಂಬಾಕು ಹಾಗೂ ಮೊಲಾಸನ್ ಅಥವಾ ಸುವಾಸನೆಭರಿತ ಪದಾರ್ಥಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಬನ್ ಮಾನಾಕ್ರೆಡ್ ರಾಸಾಯನಿಕ ವಸ್ತುವನ್ನು ಒಳಗೊಂಡಿದ್ದು ಆರೋಗ್ಯಕ್ಕೆ ಅತ್ಯಂತ ಮಾರಿಕ ಎಂದು ಎಚ್ಚರಿಸಿದೆ.

COTPA 2003ರ ಕಾಯ್ದೆಯ ಕಲಂ 3(ಪಿ) ಶೆಡ್ಯೂಲ್‌ನಲ್ಲಿ ಹುಕ್ಕಾವನ್ನು ತಂಬಾಕು ಉತ್ಪನ್ನವೆಂದು ವರ್ಗೀಕರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರು ಅದರಲ್ಲೂ ಪ್ರಮುಖವಾಗಿ ವಿದ್ಯಾರ್ಥಿ ಸಮುದಾಯದವರು ತಂಬಾಕು ಸಹಿತ ಅಥವಾ ಹುಕ್ಕಾ ಮೊಲಾಸಸ್ ಇತರೆ ಹೆಸರಿನಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸೇವನೆಮಾಡಿ ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

COTPA 2003 ಸೆಕ್ಷನ್ 4ರಡಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ ಮುಂದುವರಿದು, 30 ಹಾಗೂ ಮೂವತ್ತಕ್ಕಿಂತ ಹೆಚ್ಚು ಆಸನ ವ್ಯವಸ್ಥೆ ಇರುವ ರೆಸ್ಟೋರೆಂಟ್, ಪಬ್‌ಗಳಲ್ಲಿ ನಿಗದಿಪಡಿಸಿದ ಪ್ರತ್ಯೇಕ ಧೂಮಪಾನ ವಲಯದಲ್ಲಿ ಮಾತ್ರ ಮಾಡಬಹುದಾಗಿರುತ್ತದೆ ಧೂಮಪಾನ ವಲಯ ಅಥವಾ ಕೊಠಡಿಯಲ್ಲಿ ಪ್ರಚೋದಿಸುವ ವಸ್ತುಗಳನ್ನು ಹಾಗೂ ಇತರೆ ಸೇವೆಗಳನ್ನು ನೀಡುವುದು COTPA 2003 ಕಾಯ್ದೆಯ ಸೆಕ್ಷನ್ 4ರ ಉಲ್ಲಂಘನೆಯಾಗಿರುತ್ತದೆ.

COTPA ಕಲಂ 6(a) ಮತ್ತು 6(b) ಪ್ರಕಾರ, ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ತಂಬಾಕು ಸೇವನೆ ಮಾಡುವಂತೆ ಪ್ರಚೋದಿಸುವುದು ಹಾಗೂ ಶೈಕ್ಷಣಿಕ ಸಂಸ್ಥೆಯ ನೂರು ಗಜದ ವ್ಯಾಪ್ತಿಯಲ್ಲಿ ಹುಕ್ಕಾ ಒಳಗೊಂಡಂತೆ ಇತರೆ ತಂಬಾಕು ವಸ್ತುಗಳ ಮಾರಾಟ/ಉಪಯೋಗ ನಿಷೇಧಿಸಲಾಗಿದೆ.

ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ 2015 ಸೆಕ್ಷನ್ 77ರ ಪ್ರಕಾರ, ಅಪ್ರಾಪ್ಟರಿಗೆ ತಂಬಾಕು ಅಥವಾ ಇತರ ಮಾದಕ ವಸ್ತುಗಳ ಸೇವನೆ ಬಗ್ಗೆ ಪ್ರಚೋದಿಸುವುದು ಹಾಗೂ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ) ನಿಯಮ 2015 ರಡಿ ನಿಕೋಟಿನ್ ಅನ್ನು ವಿಷ ಅಥವಾ ಅಪಾಯಕಾರಿ ರಾಸಾಯನಿಕ ವಸ್ತುವಾಗಿ ವರ್ಗೀಕರಿಸಲಾಗಿದೆ.

ಹುಕ್ಕಾವು ಮುಚ್ಚಿರುವ ಕೊಠಡಿಯಲ್ಲಿ ನಳಿಕೆ ಅಥವಾ ವೈಪ್ ಸಲಕರಣೆ ಮೂಲಕ ಬಾಯಿಯಿಂದ ಸೇವನೆ ಮಾಡುವ ಉತ್ಪನ್ನವಾಗಿರುತ್ತದೆ. ಇದರಿಂದ ಬಾಯಿ ಮೂಲಕ ಸಾಂಕ್ರಾಮಿಕ ಕಾಯಿಲೆಗಳಾದ ಹರ್ಪಿಸ್, ಕ್ಷಯರೋಗ, ಹೆಪಟೈಟಿಸ್, ಕೋವಿಡ್ 19 ಹಾಗೂ ಇತರೆ ಕಾಯಿಲೆಗಳು ಹರಡುವ ಆತಂಕವಿದೆ.

ಹುಕ್ಕಾ ಬಾ‌ರ್ ವ್ಯವಸ್ಥೆಯು ರಾಜ್ಯ ಅಗ್ನಿ ಅನಾಹುತಗಳಿಗೆ ಕಾರಣವು ಮತ್ತು ರಾಜ್ಯ ಅಗ್ನಿ ನಿಯಂತ್ರಣ ಹಾಗೂ ಅಗ್ನಿಸುರಕ್ಷತೆ ಕಾಯ್ದೆ ಉಲ್ಲಂಘನೆ ಆಗುತ್ತದೆ.

ಹುಕ್ಕಾ ಬಾರ್ ಗಳು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಯಿದೆ 2006 ಹಾಗೂ 2.1.1 ಶೆಡ್ಯೂಲ್ 5ರ ನಿಬಂಧನೆಗಳ ಮೇರೆಗೆ ವರವಾನಗಿ ಪಡೆದಿರುತ್ತವೆ. ಹೋಟೆಲ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಹುಕ್ಕಾ ಸೇವನೆ ಮಾಡುವುದರಿಂದ ಆಹಾರ ಪದಾರ್ಥಗಳು ಸಾರ್ವಜನಿಕರ ಸೇವನೆಗೆ ಅಸುರಕ್ಷಿತವಾಗಿರುತ್ತದೆ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು.

ಸಂವಿಧಾನದ 47ನೇ ವರಿಚ್ಛೇದದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದಂತೆ, ಸಾರ್ವಜನಿಕರ ಆರೋಗ್ಯ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿರುತ್ತದೆ. ಒಟ್ಟಾರೆಯಾಗಿ, ಹುಕ್ಕಾ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ, ಸ್ವಾಧಭರಿತ, ಸ್ವಾಧರಹಿತ ಹುಕ್ಕಾ ಮೊಲಾಸಸ್, ಶಿಶಾ ಹಾಗೂ ಇದೇ ಮಾದರಿಯ ಇನ್ನಿತರೆ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ, ಉತನಗಳ ಮಾರಾಟ, ಸೇವನೆ, ಜಾಹೀರಾತು. ಪ್ರಚೋದನೆ, ಸಂಗ್ರಹಣೆ, ವ್ಯಾವಾರವನ್ನು ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಇದನ್ನು ಉಲ್ಲಂಘನೆ ಮಾಡಿದವರ ವಿರುದ್ಧ COTPA 2003, ಕಾಯ್ಕ ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ 2015, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ) ನಿಯಮ 2015 ಮತ್ತು ಭಾರತೀಯ ದಂಡಸಂಹಿತ ಮತ್ತು ಅಗ್ನಿ ನಿಯಂತ್ರಣ ಹಾಗೂ ಅಗ್ನಿಸುರಕ್ಷತೆ ಕಾಯಿದೆ ಪ್ರಕಾರ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.
ಇದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಮಿಷನರ್ ಸಾರ್ವಜನಿಕ ಆರೋಗ್ಯದ ಹಿತಾಸಕ್ತಿಯಲ್ಲಿ ಒಂದು ದೊಡ್ಡ ಹೆಜ್ಜೆ ಮುಂದಿದೆ. ಎಲ್ಲಾ ರೀತಿಯ ಹುಕ್ಕಾಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ತಮ್ಮ X ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.