ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದಕ್ಷಿಣ ಭಾರತದ ಜನರು#southtaxmovement ಎಂದು ಮತ್ತು ವಿಶೇಷವಾಗಿ ಕರ್ನಾಟಕದ ಜನರು ‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನ ಮಾಡಿದ್ದಾರೆ. ಎಕ್ಸ್ನಲ್ಲಿ #ನನ್ನತೆರಿಗೆನನ್ನಹಕ್ಕು #southtaxmovement ಹ್ಯಾಷ್ಟ್ಯಾಗ್ ಅಭಿಯಾನ ಟ್ರೆಂಡಿಂಗ್ನಲ್ಲಿದೆ.
ಜೊತೆಗೆ ಈ ಅಭಿಯಾನಕ್ಕೆ ಕರ್ನಾಟಕ ಮುಖ್ಯಮಂತ್ರಿ ಭಾಗಿಯಾಗಿದ್ದು ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ.
ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್.
ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು.
ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.