ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದಿದೆ. ಈ ಯೋಜನೆಗಳಿಗಗಿ ಬಜೆಟ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಸರ್ಕಾರವು, ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಗೃಹಲಕ್ಷ್ಮಿ, ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ, ಉಚಿತ ವಿದ್ಯುತ್‌ಗಾಗಿ ಗೃಹಜ್ಯೋತಿ, ನಿರುದ್ಯೋಗಿ ಪದವೀಧರರಿಗೆ ಯುವನಿಧಿ ಮತ್ತು ಹಸಿವು ಮುಕ್ತ ಕರ್ನಾಟಕಕ್ಕಾಗಿ ಅನ್ನಭಾಗ್ಯ ಯೋಜನೆಗಳನ್ನು ಕರ್ನಾಟಕ ಸರ್ಕಾರ ಈ ಐದು ಗ್ಯಾರಂಟಿಗಳನ್ನು ಯಶಸ್ವಿಯಿಂದ ಮುಂದುವರಿಸುತ್ತಿದೆ.
ಆದರೆ ಕೆಲವೊಂದು ಸರ್ಕಾರದ ವೈಪಲ್ಯ ಬೆಳವಣಿಗೆಗಳಿಂದ, ವಿರೋಧ ಪಕ್ಷ ಮತ್ತು ಇತರರು, ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ವಿರೋಧ ಮತ್ತು ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಈ ಬೆಳವಣಿಗೆಗಳು ಕರ್ನಾಟಕದ ಜನರಿಗೆ ಹಲವು ಗೊಂದಲ ಹುಂಟು ಮಾಡುತ್ತಿದೆ. ಆದ್ದರಿಂದ ಕುದ್ದು ಮಾನ್ಯ ಮುಖ್ಯ ಮಂತಿಗಳು ಈ ಎಲ್ಲ ಊಹಾ-ಪೋಹ ಗಳಿಗೆ ಅಂತಿಮವಾಗಿ ತೆರೆಯಲೆದಿದ್ದರೆ.
“ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಜನಪರ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕವಾಗಿ ಬಲ ತುಂಬುವ ಕಾರ್ಯಕ್ರಮಗಳಾಗಿವೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು, ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.”
ಇದರಿಂದ ಜನರು ಇನ್ನುಮುಂದೆ ಯಾವುದೇ ನಕಲಿ ಮಾಹಿತಿಗಳಿಗೆ ಕಿವಿ ಕೊಡದೆ, ಸರ್ಕಾರದ ಎಲ್ಲ ಅಧಿಕೃತ ಮಾಹಿತಿಗಳಿಗೆ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ನಮ್ಮ ವಾಟ್ಸಾಪ್ ಗುಂಪಿಗೆ ಸೇರಿಕೊಳ್ಳಿ.
.