ಪರಿಶಿಷ್ಟ ಜಾತಿಯ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಮತ್ತು ವಿದ್ಯುತ್ ಅಳವಡಿಸಿ ಕೊಡುವ ಯೋಚನೆ ಇದಾಗಿದೆ.
ಪರಿಶಿಷ್ಟ ಜಾತಿಯ 1.20ಯಿಂದ 5 ಎಕರೆಯವರೆಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸರ್ಕಾರದಿಂದ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು.
ಈ ಯೋಜನೆಯ ಘಟಕ ವೆಚ್ಚ ₹4.75 ಲಕ್ಷ / ₹3.75 ಲಕ್ಷ ಆಗಿರುತ್ತದೆ ಇದರಲ್ಲಿ ₹50,000 ಸಾಲವೂ ಸೇರಿರುತ್ತದೆ.
ವಿಶೇಷ ಸೂಚನೆ: 2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ರೈತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-10-2024
ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ
https://sevasindhu.karnataka.gov.in
ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.