ಮುಖ್ಯಾಂಶಗಳು

1,000 ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳ ನೇಮಕಾತಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ!!

1,000 ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳ ನೇಮಕಾತಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ!!
Listen to this article

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ
(ಯಾವುದನ್ನು ತತ್ಸಮಾನವೆಂದು ಸರ್ಕಾರ ಪರಿಗಣಿಸಿದೆ ಎಂದು ನೇಮಕತಿಯ ಅಧಿಸೂಚನೆಯ ಪ್ರಕಟಣೆಯಲ್ಲಿ ನೀವು ತಿಳಿಯಬಹುದು).

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು.
  • ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷಗಳು.
  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷಗಳು.

ಅರ್ಜಿ ಸಲ್ಲಿಸುವ ವಿಧಾನ: ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ ತೋರಿಸುವ ಲಿಂಕ್ ಆಯ್ಕೆ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿ ಯಾವುದಾದರೂ ಒಂದು ಜಿಲ್ಲೆಗೆ ಮಾತ್ರ ಹುದ್ದೆ ಬಯಸಿ ಅರ್ಜಿಯನ್ನು ಸಲ್ಲಿಸತಕ್ಕದ್ದು ಒಮ್ಮೆ ಸಲ್ಲಿಸಿದ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ ಮಾಡಲು ಅವಕಾಶ ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಎಚ್ಚರಿಕೆಯಿಂದ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ: 04/03/2024 ಬೆಳಿಗ್ಗೆ 11:00 ರಿಂದ 03/04/2024 ರಾತ್ರಿ 11:59ರ ವರೆಗೆ ಅವಕಾಶ ನೀಡಲಾಗಿದೆ.
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 06/04/2024

ಶುಲ್ಕದ ವಿವರಗಳು:

  • ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗಗಳು (ಪ್ರವರ್ಗ 2A/2B/3A/3B) ಅಭ್ಯರ್ಥಿಗಳಿಗೆ: ರೂ.750/-
  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ:ರೂ.500/-.

ಪರೀಕ್ಷಾ ವಿಧಾನ:
ಈ ಪರೀಕ್ಷೆಯನ್ನು ಆಫ್ಲೈನ್ ಓ ಎಮ್ ಆರ್ ಮಾದರಿ (offline – OMR type ) ಮೂಲಕ ಪರೀಕ್ಷೆ ನಡೆಸಲಾಗುವುದು.

ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಒಂದು ಮೂಲ ಗುರುತಿನ ಚೀಟಿಯೊಂದಿಗೆ ( ಪ್ಯಾನ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ಆಧಾರ್ ಕಾರ್ಡ್ etc) ಪರೀಕ್ಷೆ ಕೇಂದ್ರಗಳಿಗೆ ಹೋಗಬೇಕು.

ಕನ್ನಡ ಕಡ್ಡಾಯ ಭಾಷಾ ಪರೀಕ್ಷೆ:
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಬಹು ಆಯ್ಕೆ ಮಾದರಿ ಪತ್ರಿಕೆಯಾಗಿದ್ದು ಗರಿಷ್ಠ 150 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು ಅಭ್ಯರ್ಥಿಗಳು ಇದರಲ್ಲಿ ಅರ್ಹತೆಗಳಿಸಲು ಕನಿಷ್ಠ 50 ಅಂಕಗಳನ್ನು ಗಳಿಸತಕ್ಕದ್ದು.
ನೆಗೆಟಿವ್ ಮೌಲ್ಯಮಾಪನವನ್ನು ಒಳಗೊಂಡಿರುತ್ತದೆ.

Syllabus:

ಜಾತಿ / ಮೀಸಲಾತಿ ಪ್ರಮಾಣ ಪತ್ರಗಳು:
•ಮಾಜಿ ಸೈನಿಕ
•ಗ್ರಾಮೀಣ ಅಭ್ಯರ್ಥಿ
•ಕನ್ನಡ ಮಾಧ್ಯಮ ಅಭ್ಯರ್ಥಿ
•ವಿಕಲಚೇತನ ಅಭ್ಯರ್ಥಿ
•ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಸೇರಿದ ಅಭ್ಯರ್ಥಿ
•ಸರ್ಕಾರಿ ಸೇವೆಯಲ್ಲಿರುವ ನೌಕರರಿಗೆ ಕಲ್ಯಾಣ ಕರ್ನಾಟಕ ಮೀಸಲಾತಿ
•ತೃತೀಯ ಲಿಂಗದ ಅಭ್ಯರ್ಥಿಗಳು
•ಯೋಜನೆಗಳಿಂದ ನಿರ್ವಹಿಸಿತರಾದ ಅಭ್ಯರ್ಥಿಗಳು
ಈ ಎಲ್ಲಾ ಮೀಸಲಾತಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಕಟಣೆಯಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆ ನೋಡತಕ್ಕದ್ದು ಅಥವಾ ಪ್ರಾಧಿಕಾರದ ವೆಬ್ಸೈಟ್ ನೋಡತಕ್ಕದ್ದು ಅಥವಾ ಕಚೇರಿಯ ಮಾಹಿತಿ ಕೇಂದ್ರ: 080-23460460 ಸಂಪರ್ಕಿಸತಕ್ಕದ್ದು.

ಸಂಪೂರ್ಣ ಅಧಿಸೂಚನೆ ಡೌನ್ಲೋಡ್ ಮಾಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಇನ್ನು ಹೆಚ್ಚಿನ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರೂಪ್ JOIN ಆಗಿ:

https://t.me/fastkannada

ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.