ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ ನೀಡುವ ಊಟ, ವಸತಿಯೊಂದಿಗೆ UPSC ಸಂಯೋಜಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
UPSC ಸಂಯೋಜಿತ(Integrated Under Graduate Degree) ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
ದ್ವಿತೀಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಬಿ.ಎ, ಬಿ.ಕಾಂ, ಬಿ.ಎಸ್ಸಿ ಪದವಿ ಅಧ್ಯಯನದೊಂದಿಗೆ ಯು.ಪಿ.ಎಸ್.ಸಿ ಸಂಯೋಜಿತ ಪದವಿ (Integrated Under Graduate Degree) ಕಾರ್ಯಕ್ರಮದ ಉದ್ದೇಶವಾಗಿದೆ. ಸಂಯೋಜಿತ ಪದವಿಯು ವಸತಿಯುತ ಕಾರ್ಯಕ್ರಮವಾಗಿರುವುದರಿಂದ ಊಟ/ವಸತಿಯೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ.
ವಯಸ್ಸು: ಕನಿಷ್ಟ 17
ಕೋರ್ಸ್ ಗಳ ವಿವರ: ಬಿ.ಎ, ಬಿ.ಕಾಂ, ಬಿ.ಎಸ್ಸಿ ಪದವಿ.
ಅರ್ಹತೆ:
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು;
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
- ದೈಹಿಕ ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ ನಿಗಧಿತ ಪ್ರಾಧಿಕಾರದಿಂದ ನಿಗಧಿಪಡಿಸಲಾದ ಕೊನೆಯ ದಿನಾಂಕದೊಳಗೆ ಅಂಗವಿಕಲ ಪ್ರಮಾಣ ಪತ್ರ ಪಡೆದಿರಬೇಕು.
- ದ್ವಿತೀಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾಗಿರಬೇಕು.
- ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.5.00 ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/07/2024
ಆಯ್ಕೆಯ ವಿಧಾನ: ದ್ವಿತೀಯ ಪಿ.ಯು.ಸಿ ಯಲ್ಲಿ ಪಡೆದಿರುವ ಅಂಕಗಳ ಆಧಾರದ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವೆಬ್ ಸೈಟ್ ವಿಳಾಸ:
ಇನ್ನಷ್ಟು ಅಂಹಿತಿಗೆ ಅಧಿಸೂಚನೆ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ