ಮುಖ್ಯಾಂಶಗಳು

Anganavadi Requirement: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಕೆಳಗೆ ನೀಡಿರುವ ಮಾಹಿತಿ ಜೊತೆಗೆ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸುವ ವಿಧಾನದ ಕೈಪಿಡಿಯನ್ನು ಕೆಳಗೆ ಲಿಂಕ್ ನಲ್ಲಿ ನೀಡಲಾಗಿದೆ.

ಅರ್ಹತೆ :
ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಯೋಮಿತಿ :
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅಂಗನವಾಡಿ ಕಾರ್ಯಕರ್ತೆ ವಿದ್ಯಾರ್ಹತೆ : ಕನಿಷ್ಠ P.U.C. ತೇರ್ಗಡೆ ಹೊಂದಿರಬೇಕು. S.S.L.C.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:
S.S.L.C ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಗೆ ಆರಂಭವಾದ ದಿನಾಂಕ : 08/7/2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 04/8/2024

ಸ್ಥಳೀಯತೆ:
1. ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು.
2. ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್‌ ನಲ್ಲಿ ವಾಸ್ತವ್ಯ ಹೊಂದಿರಬೇಕು.
3. ತಹಶೀಲ್ದಾರ್ / ಉಪ ತಹಶೀಲ್ದಾರ್‌ರವರ ಮೂರು ವರ್ಷದ ವಾಸ್ತವ್ಯ ದೃಢೀಕರಣದೊಂದಿಗೆ ಸ್ಥಳೀಯರು ಎಂಬುದನ್ನು ದೃಢೀಕರಿಸಲು ಪೂರಕ ದಾಖಲೆಗಳಾಗಿ ಆಧಾರ ಕಾರ್ಡ್, ರೇಷನ್ ಕಾರ್ಡ್ ಮತದಾರರ ಗುರುತಿನ ಚೀಟಿಗಳನ್ನು ಪಡೆಯುವುದು. ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರ ಪಡೆಯುವುದು.

ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ ಮತ್ತು ಅಂಗನವಾಡಿ ಕೇಂದ್ರಗಳ ವ್ಯಾಪ್ತಿ ಗುರುತಿಸುವಿಕೆಯ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.
ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು ಹಾಗೂ ಆಯ್ಕೆ ವಿಧಾನ ಮತ್ತು ಇನ್ನಿತರ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.


ಅಧಿಸೂಚನೆ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:

ಅರ್ಜಿ ಸಲ್ಲಿಸುವ ವಿಧಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.