ಮುಖ್ಯಾಂಶಗಳು

Free driving training for SC/ST: ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ

ಬೆಂ.ಮ.ಸಾ.ಸಂಸ್ಥೆಯು, ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್.ಟಿ)ಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯ (ವಸತಿ ಸಹಿತ / ವಸತಿ ರಹಿತ) ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ. ಸದರಿ ತರಬೇತಿಯನ್ನು ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ(ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್.ಟಿ)ಗಳ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು/ಸಲ್ಲಿಸಬೇಕಾಗಿರುವ ದಾಖಲಾತಿಗಳ ವಿವರ ಕೆಳಗೆ ನೀಡಲಾಗಿದೆ.

ಲಘು ವಾಹನ(ಕಾರ್/ಜೀಪ್) ಚಾಲನಾ ತರಬೇತಿಗಾಗಿ : ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು.

ಭಾರಿ ವಾಹನ(ಬಸ್) ಚಾಲನಾ ತರಬೇತಿಗಾಗಿ:
ಕನಿಷ್ಠ 20 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಮತ್ತು ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರಬೇಕು.

ಸೂಚನೆಗಳು:
1. ಮೊದಲು ಬಂದವರಿಗೆ, ಮೊದಲ ಆದ್ಯತೆಯ ಮೇರೆಗೆ, ಅರ್ಹ ಅಭ್ಯರ್ಥಿಗಳಿಗೆ ಲಘು/ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ.

2. ವಸತಿ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ (ನಿಗದಿತ ಸಂಖ್ಯೆಯಂತೆ) ತರಬೇತಿ ಅವಧಿಯಲ್ಲಿ ವಸತಿ ಸೌಕರ್ಯ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ನೀಡಲಾಗುತ್ತದೆ.

3. ಆಸಕ್ತಿ ಇರುವ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್

(ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ )

ಮೇಲಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪೋರ್ಟಲ್ ಸಹಾಯ ಕೇಂದ್ರದ ಸಂಪರ್ಕ ಸಂಖ್ಯೆ: 08022279954, 8792662814/ 8792662816

4. ತರಬೇತಿ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ವೆಬ್ ಸೈಟ್ www.mybmtc.gov.in ನಿಂದ ಮತ್ತು ದೂರವಾಣಿ: 6364858520 / 7760991085 ಪಡೆಯಬಹುದು.

5. ತರಬೇತಿಗೆ ಹಾಜರಾಗುವ ವೇಳೆಯಲ್ಲಿ ಅಭ್ಯರ್ಥಿಗಳು ಮೇಲಿನ ತಮ್ಮ ಮೂಲ ದಾಖಲೆ(ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಭಾವಚಿತ್ರ), ಸೇವಾ ಸಿಂಧು ಪೋರ್ಟಲ್‌ ನಲ್ಲಿ ಮುದ್ರಿತ ಅರ್ಜಿ ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗುವುದು.


ಇತ್ತೀಚಿನ ಸುದ್ದಿಗಳು

ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.