ಆಗಸ್ಟ್ 27ರಂದು ನಡೆದಿದ್ದ KAS ಪರೀಕ್ಷೆಯು ಲೋಪ ದೋಷಗಳಿಂದ ಕೂಡಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರು ಪರೀಕ್ಷೆ ನಡೆಸಲು ನಿರ್ಧರಿಸಿದ್ದೇವೆ ಎಂದು ತಮ್ಮ X ಖಾತೆಯಲ್ಲಿ ಈಗೆ ಬರೆದುಕೊಂಡಿದ್ದಾರೆ
“ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ.”