ಮುಖ್ಯಾಂಶಗಳು

OBC ಅಭ್ಯರ್ಥಿಗಳಿಗೆ ಸಮವಸ್ತ್ರ (UNIFORMED) ಸೇವೆಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ, ಭದ್ರತಾ ಪಡೆ ಮತ್ತು ರಾಜ್ಯ ಪೊಲೀಸ್ ಇತರ ಸಮವಸ್ತ್ರ ಸೇವೆಗಳಿಗೆ ಸೇರಲು ಬಯಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಅರ್ಹ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು :

ವಿದ್ಯಾರ್ಹತೆ – 10ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು.
ವಯೋಮಿತಿ – ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) ಜುಲೈ 10 2024ಕ್ಕೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 10 ಜುಲೈ 2004 ರಿಂದ 10 ಜುಲೈ 2007ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ತರಬೇತಿ ನೀಡುವ ಸ್ಥಳಗಳು:
ತರಬೇತಿಯನ್ನು ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ಯಾವುದಾದರು ಒಂದು ಜಿಲ್ಲೆಯನ್ನು ತರಬೇತಿಗೆ ಆಯ್ಕೆ ಮಾಡಿಕೊಂಡು ಸದರಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/7/2024

ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್-ಸೈಟ್ ನಲ್ಲಿ ಪಡೆಯಬಹುದಾಗಿದೆ.
https://bcwd.karnataka.gov.in/new-page/Army%20Training%202024-25/kn

ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.