ಮುಖ್ಯಾಂಶಗಳು

Karnataka News: SC/ST ಜನರ ಮೇಲಿನ ದೌರ್ಜನ್ಯ ಪ್ರಕರಣದ ಮೇಲೆ ಕ್ರಮ ವಹಿಸಲು ವಿಶೇಷ ಪೊಲೀಸ್ ಠಾಣೆಗಳ ಸ್ಥಾಪನೆ!

ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಜಾರಿ ಮಾಡಲು ನಿರ್ಧಾರಿಸಲಾಗಿದೆ ಇದ್ದಕ್ಕೆ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ನೇಮಿಸಿ ಸೂಕ್ತ ದತ್ತಾಂಶವನ್ನು ಪಡೆದು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರು ಹೇಳಿದ್ದಾರೆ.

ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಪರಿಹರಿಸಲು ರಾಜ್ಯದಲ್ಲಿ DCRE ವಿಶೇಷ 33 ಪೊಲೀಸ್ ಠಾಣೆಗಳ ಸ್ಥಾಪನೆಗೆ ಸಂಪುಟದಿಂದ ಅನುಮೋದನೆ ದೊರೆತಿದೆ.

ಪ್ರತಿ ಜಿಲ್ಲೆಯಲ್ಲಿ ಒಂದು DCRE ಪೊಲೀಸ್ ಠಾಣೆ ಮತ್ತು ಬೆಂಗಳೂರಿನಲ್ಲಿ ಎರಡು ಪೊಲೀಸ್ ಠಾಣೆಗಳು ಸ್ಥಾಪಿಸಲಾಗುವುದು. ಈ ಘಟಕಗಳನ್ನು ನಿರ್ವಹಿಸಲು ವಿವಿಧ ಹುದ್ದೆಗಳಲ್ಲಿ 450 ಸಿಬ್ಬಂದಿಗಳನ್ನು ನೇಮಕಾತಿ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.
ಪರಿಶಿಷ್ಟ ಸಮುದಾಯಗಳು ಈ ಠಾಣೆಗಳ ಸೇವೆಯನ್ನು ಬಳಸಿಕೊಂಡರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗೆ ಪ್ರಮುಖ ಪಾತ್ರ ವಹಿಸುತ್ತದೆ.


ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.