ಪರಾರಿಯಾಗಿರುವ ಪ್ರಜ್ವಲ್ ರೇವಣ್ಣರನ್ನು ಭಾರತಕ್ಕೆ ಕರೆತರಲು ಪ್ರಧಾನಿಗೆ ಪತ್ರ ಬರೆದ ಸಿಎಂ!

ಮಹಿಳಾ ದೌರ್ಜನ್ಯದಂತಹ ಗುರುತರ ಆರೋಪ ಹೊತ್ತಿರುವ ಹಾಲಿ‌ ಸಂಸದ ಹಾಗೂ ಎನ್‌ಡಿಎ ಮೈತ್ರಿಕೂಟದ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಿದೆ.

ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ. ಹಾಗಾಗಿ ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯಗಳು ತಕ್ಷಣ ಕಾರ್ಯಪ್ರವೃತ್ತವಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯುವ ಜೊತೆಗೆ ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳನ್ನು ಬಳಸಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರನ್ನು ಮರಳಿ ಭಾರತಕ್ಕೆ ಕರೆತರಲು ನೆರವಾಗಬೇಕು ಎಂದು ಪ್ರಧಾನಿ @narendramodi ಅವರಿಗೆ ಪತ್ರ ಬರೆದಿದ್ದೇನೆ ಎಂದು ತಮ್ಮ X ಖಾತೆಯ ಮೂಲಕ ಪತ್ರದ ಜೊತೆಗೆ ಹಂಚಿಕೊಂಡಿದ್ದಾರೆ.

ಹಂಚಿಕೊಳ್ಳಿ / Share

Leave a Reply

Your email address will not be published. Required fields are marked *

ಮೇಲಕ್ಕೆ